ಬೆಳಗಾವಿಯಲ್ಲಿ ನಡೆದ ಜೆ.ಡಿ. ಎಸ್ ಸಮಾವೇಶದಲ್ಲಿ ದೇವೇ ಗೌಡ್ರು ಕಾಂಗ್ರೆಸ್ , ಬಿಜೆಪಿ ಯನ್ನು ಹೇಗೆ ಮಟ್ಟ ಹಾಕಲಿ ಎಂದು ಯೋಚನಾ ಮಗ್ನರಾಗಿ ಕುಳಿತ ಪರಿ ಇದು. ಅಥವಾ ಜೋರು ನಿದ್ದೆ ತೂಕಡಿಸಿ ಹಿಂಗ್ ಕುಂತರೋ ? ಯಾರಿಗ್ ಗೊತ್ತು?
'ಅಮೆರಿಕದ ಜನರು ವಾಲ್ ಸ್ಟ್ರೀಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಕ್ಕೆ ಹಲವಾರು ಕಾರಣಗಳಿವೆ. ಸಾಮಾನ್ಯ ಜನರಿಗೆ ವೆಚ್ಚ ಕಡಿತ ಮಾಡುವುದಕ್ಕೆ ಹೇಳಿರುವಂಥ ಸಂದರ್ಭದಲ್ಲಿ ಬ್ಯಾಂಕರ್ ಗಳಿಗೆ, ಕಾರ್ಪೊರೇಟ್ ಗಳಿಗೆ ಲಕ್ಷಾಂತರ ಡಾಲರ್ ನೆರವು ಸಿಗುತ್ತಿರುವ ಕಾರಣದಿಂದಾಗಿ ಅಮೆರಿಕ ಮತ್ತು ಐರೋಪ್ಯ ದೇಶಗಳಲ್ಲಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುವ ಭೀತಿಯಿದೆ. ಐರೋಪ್ಯ ರಾಷ್ಟ್ರಗಳಲ್ಲಿಯೂ ಇದೇ ಆತಂಕವಿದೆ. ಈ ಪ್ರತಿಭಟನೆ ನಿಲ್ಲಬೇಕು ಮತ್ತು ಸಮಸ್ಯೆ ನಿವಾರಣೆಯಾಗಬೇಕು ಎಂದಾದರೆ ವಿಶ್ವಾಸಾರ್ಹವಾದ, ಸದೃಢವಾದ ವ್ಯವಸ್ಥೆಯೊಂದರ ಅಗತ್ಯವಿದೆ....' ಇದು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಮೆರಿಕದಲ್ಲಿನ ಪ್ರತಿಭಟನೆಯ ಬಗ್ಗೆ ಕೊಟ್ಟಂಥ ಪ್ರತಿಕ್ರಿಯೆ. ಈ ಮಾತಿನಲ್ಲಿ ವಾಸ್ತವಾಂಶವಿದೆ ಜೊತೆಗೆ ಒಂದು ರೀತಿಯ ನಿರ್ಲಕ್ಷ್ಯವಿದೆ. ಜನರು ವಾಲ್ ಸ್ಟ್ರೀಟ್ ಗೆ ಮುತ್ತಿಗೆ ಹಾಕಿದ್ದಾರೆ. ವಿವಿಧ ದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಪೊರೇಟ್ ಗಳ ಮೇಲೆ, ಅವುಗಳಿಗೆ ಪ್ರೋತ್ಸಾಹ ಕೊಡುತ್ತಿರುವಂಥ ಸರಕಾರಗಳ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಕ್ತ ಆರ್ಥಿಕತೆಯ ವಿರುದ್ಧ ಧ್ವನಿಯೆತ್ತಿದ್ದಾರೆ. ನಿಜ, ಅಮೆರಿಕ, ಐರೋಪ್ಯ ರಾಷ್ಟ್ರಗಳಲ್ಲಿ ನಿರುದ್ಯೋಗದ ಭೀತಿಯಿದೆ. ಸಿಂಗ್ ಅವರ ಈ ಮಾತು ನಿಜ. ಆದರೆ ಭಾರತದ ದೃಷ್ಟಿಯಲ್ಲಿ ಅವರೇನೂ ಚಿಂತನೆ ನಡೆಸಿದಂತಿಲ್ಲ. ...
ಜೀವದ ಬೆಲೆ ಏನು ಎಂಬುದನ್ನು ಪ್ರತಿಕ್ಷಣವೂ ಕಣ್ಣಾರೆ ಕಾಣುತ್ತಿದ್ದರೂ, ಜೀವದ ಹಂಗನ್ನು ಬಿಟ್ಟವರು ನಾವು. ಸಾವಿನ ಘೋರ ದೃಶ್ಯಗಳು, ಬರ್ಬರ ಹತ್ಯೆಯ ಕ್ಷಣಗಳು ಮಾನವ ಸಹಜವಾಗಿಯೇ ವಿವಿಧ ಭಾವನೆಗಳ ತಲ್ಲಣವನ್ನು ನಮ್ಮೆದೆಯಲ್ಲಿ ಎಬ್ಬಿಸಿದರೂ ಅವುಗಳ ಕಡೆಗೊಂದು ನಿರ್ಲಿಪ್ತ ದೃಷ್ಟಿಯನ್ನು ಬೀರಿ 'ವೃತ್ತಿಃ ಪರಮೋಧರ್ಮಃ' ಎಂಬ ತತ್ತ್ವಕ್ಕೆ ಬದ್ಧರಾಗಿ ಕೆಲಸ ಮಾಡುವವರು. ಇಷ್ಟು ವಿವರಣೆ ಕೊಡುವಾಗಲೇ ನಾವು ಪತ್ರಕರ್ತರು ಎಂಬುದು ಗೊತ್ತಾಗಿರಬಹುದು. ಜೀವನವೇ ಹಾಗೆ. ಅದು ಎಳೆದುಕೊಂಡು ಹೋದತ್ತ ಸಾಗುವುದಷ್ಟೇ ಜೀವಿಗಳಿಂದ ಸಾಧ್ಯ. ಆದರೆ ಅದೆಷ್ಟೋ ಬಾರಿ ನಾವು ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಬೇಕಾಗುತ್ತದೆ. ತಾನು ಹೋಗೆನೆಂಬ ಹಠಮಾರಿ ಭಾವವನ್ನು ಹೊಮ್ಮಿಸುವ ಜೀವನವನ್ನು ನಮಗೆ ಬೇಕಾದ ದಿಕ್ಕಿನತ್ತ ಸೆಳೆದುಕೊಳ್ಳಬೇಕಾಗುತ್ತದೆ. ಸಾಮಾನ್ಯ ಸಮಾರಂಭಗಳಲ್ಲಿ ಭಾಗವಹಿಸಿ ವರದಿ ಮಾಡುವಾಗ ಇರುವ ನೆಮ್ಮದಿ, ಅಪರಾಧ ಜಗತ್ತಿನ ಬಗ್ಗೆ, ಯುದ್ಧದ ಕ್ಷಣಗಳ ಬಗ್ಗೆ ವರದಿ ಮಾಡುವಾಗ ಅದೆಷ್ಟೋ ದೂರಕ್ಕೆ ಓಡಿ ಹೋಗಿರುತ್ತದೆ. ಟಿವಿ ಮಾಧ್ಯಮಗಳ ಪ್ರಭಾವದಿಂದಾಗಿ 'ನಾ ಮೊದಲು ವರದಿ ಮಾಡಬೇಕು, ಬ್ರೇಕಿಂಗ್ ನ್ಯೂಸ್ ನಾನೇ ಕೊಡಬೇಕು' ಎಂಬ ಧಾವಂತ ಮುದ್ರಣ ಮಾಧ್ಯಮಗಳಲ್ಲಿ ಕೊಂಚ ಕಡಿಮೆಯಾಗಿದೆ ಎಂಬುದನ್ನು ಒಪ್ಪಿಕೊಳ್ಳಬೇಕು. ಹಾಗಂತ ಅದೆಷ್ಟೋ ಬಾರಿ ಟಿವಿ ಮಾಧ್ಯಮಗಳಿಗಿಂತ ವೇಗವಾಗಿ, ಅವುಗಳಿಗೆ ಸಿಗದ ಸುದ್ದಿಯನ್ನು ಮುಖಪುಟದಲ್ಲೇ ಪ್ರಕಟಿಸಿದ ದಾಖಲ...
ಅವರ ಇಂತಹ ಸಾವಿರಾರು ಪೋಸ್ಗಳು ಚಿರಪರಿಚಿತ
ReplyDelete